ಸಿ.ಎಂ.ಉದಾಸಿ ಅವರ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ…

114
firstsuddi

ಹಾವೇರಿ : ಬಿಜೆಪಿ ಹಿರಿಯ ಶಾಸಕ, ಮಾಜಿ ಸಚಿವ ಸಿ.ಎಂ.ಉದಾಸಿ ಅವರು ಅನಾರೋಗ್ಯದ ಹಿನ್ನಲೆ ನಿನ್ನೆ ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದು, ಇಂದು ಜಿಲ್ಲೆಯ ಹಾನಗಲ್ ಪಟ್ಟಣದ ವಿರಕ್ತಮಠದ ರುದ್ರಭೂಮಿಯಲ್ಲಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನೆರವೇರಲಿದೆ.

ಮಧ್ಯಾಹ್ನ 12 ಗಂಟೆಗೆ ಹಾನಗಲ್ ಪಟ್ಟಣಕ್ಕೆ ಮೃತದೇಹ ಬರಲಿದ್ದು, ಮಧ್ಯಾಹ್ನ 1 ಗಂಟೆಗೆ ಪಟ್ಟಣದ ಗೌಳಿ ಗಲ್ಲಿಯಲ್ಲಿರುವ ನಿವಾಸದಲ್ಲಿ ಕುಟುಂಬಸ್ಥರು ಪೂಜೆ ಸಲ್ಲಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಯ ನಂತರ ಪಟ್ಟಣದ ವಿರಕ್ತಮಠದ ಆವರಣದಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ಕೋವಿಡ್ ಹಿನ್ನಲೆ ಅಂತರ ಕಾಯ್ದುಕೊಂಡು ದರ್ಶನ ಪಡೆಯಲು ಬ್ಯಾರಿಕೇಡ್ ಗಳನ್ನ ಹಾಕಿ ಪೊಲೀಸ್ ಸಿಬ್ಬಂದಿ ವ್ಯವಸ್ಥೆ ಮಾಡಿದ್ದು, ಇಂದು ಸಂಜೆ 4 ಗಂಟೆಗೆ ಲಿಂಗಾಯತ ಸಂಪ್ರದಾಯದ ಪ್ರಕಾರ ಅಂತ್ಯಕ್ರಿಯೆ ನೆರವೇರಲಿದೆ.

ಸದ್ಯ ಸಿ.ಎಂ.ಉದಾಸಿ ಅವರ ಹಾನಗಲ್ ಪಟ್ಟಣದ ಗೌಳಿ ಗಲ್ಲಿಯ ನಿವಾಸದಲ್ಲಿ ನೀರವ ಮೌನ ಆವರಿಸಿದೆ.