ಬೆಂಗಳೂರು : ಬ್ರಾಹ್ಮಣರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಕನ್ನಡದ ಖ್ಯಾತ ನಟ ಚೇತನ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬ್ರಾಹ್ಮಣ್ಯ ಹಾಗೂ ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು, ಬ್ರಾಹ್ಮಣರ ಕುರಿತು ವ್ಯಂಗ್ಯವಾಗಿ ಮಾತಾಡಿದ್ದಾರೆ. ಇಂಥ ವಿಡಿಯೋವನ್ನ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದಾರೆ. ಹಿಂದೂ ಧರ್ಮ ನಾನಾ ಪ್ರವರ್ಗಗಳಲ್ಲಿ ಇರುವವರನ್ನು ಬೇರ್ಪಡಿಸಿ ಅವರಲ್ಲಿ ಧರ್ಮಾಂಧತೆಯನ್ನು ಹುಟ್ಟುಹಾಕಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ರೀತಿ ಚೇತನ್ ಹೇಳಿಕೆ ನೀಡಿದ್ದಾರೆ ಎಂದು ವಿಪ್ರ ಯುವ ವೇದಿಕೆ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿತ್ತು. ಅಲ್ಲದೇ ಲಾಕ್ ಡೌನ್ ವೇಳೆ ಬ್ರಾಹ್ಮಣರಿಗೆ ಪ್ರತ್ಯೇಕವಾಗಿ ಆಹಾರ ವಿತರಣೆ ಮಾಡಿದ ನಟರೊಬ್ಬರ ಬಗ್ಗೆ ಚೇತನ್ ಟೀಕಿಸಿದ್ದರು.
ಸದ್ಯ ದೂರಿನನ್ವಯ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ನಟ ಚೇತನ್ ವಿರುದ್ದ ಎಫ್ ಐ ಆರ್ ದಾಖಲಾಗಿದ್ದು, ಐಪಿಸಿ 153(ಬಿ) 295(ಎ) ಆರೋಪದಡಿ ಪ್ರಕರಣ ದಾಖಲಾಗಿದೆ.










