ಕೊರೊನಾ ಸೋಂಕಿನಿಂದ ಮೃತಪಟ್ಟ ಕುಟುಂಬಗಳಿಗೆ ಒಂದು ಲಕ್ಷ ರೂ ಪರಿಹಾರ : ಸಿಎಂ ಯಡಿಯೂರಪ್ಪ ಘೋಷಣೆ…

112
Firstsuddi

ಬೆಂಗಳೂರು: ಕೋವಿಡ್ ಸೋಂಕಿನಿಂದ ಮೃತಪಟ್ಟ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಿಎಂ ಬಿ.ಎಸ್. ಯಡಿಯೂರಪ್ಪನವರು ಘೋಷಣೆ ಮಾಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕಿನಿಂದ ಮೃತಪಟ್ಟು ಹಲವಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಇನ್ನೂ ಕೆಲ ಕುಟುಂಬಗಳು ಬೀದಿಪಾಲಾಗಿವೆ. ಇದನ್ನು ಮನಗಂಡು ಬಿಪಿಎಲ್ ಕುಟುಂಬದಲ್ಲಿ ಕೊರೊನಾದಿಂದ ದುಡಿಯುವ ವ್ಯಕ್ತಿ ಅಥವಾ ವಯಸ್ಕರು ಮೃತಪಟ್ಟರೆ ಅಂತಹ ಕುಟುಂಬಕ್ಕೆ ಒಬ್ಬರಿಗೆ ಸೀಮಿತವಾಗಿ 1 ಲಕ್ಷ ರೂ. ಪರಿಹಾರ ನೀಡಲು ತೀರ್ಮಾನಿಸಲಾಗಿದೆ. ಇದಕ್ಕಾಗಿ 250 ರಿಂದ 300 ಕೋಟಿ ರೂ. ವಿನಿಯೋಗಿಸಲಾಗುತ್ತದೆ ಎಂದು ಯಡಿಯೂರಪ್ಪನವರು ಹೇಳಿದರು.