ಹುಬ್ಬಳ್ಳಿ : ಲ್ಯಾಂಡಿಗ್ ವೇಳೆ ವಿಮಾನದ ಟಯರ್ ಬ್ಲಾಸ್ಟ್ ಆಗಿದ್ದು, ಸಂಭವಿಸಬೇಕಾಗಿದ್ದ ಭಾರೀ ಅನಾಹುತವೊಂದು ತಪ್ಪಿದೆ.
ನಿನ್ನೆ ಸಂಜೆ ಕಣ್ಣೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನ, ನಿನ್ನೆ ರಾತ್ರಿ ಹುಬ್ಬಳ್ಳಿಯಲ್ಲಿ ಲ್ಯಾಂಡಿಂಗ್ ಆಗುವ ವೇಳೆ ರನ್ ವೇ ಯಿಂದ ಸುಮಾರು 200 ಮೀಟರ್ ಮುಂದೆ ಬಂದು ಲ್ಯಾಂಡ್ ಆಗಿದ್ದು, ಕ್ರಾಪ್ ವಿಂಡ್ ಪರಿಣಾಮದಿಂದ ವಿಮಾನದ ಮುಂದಿನ ಟಯರ್ ಬ್ಲಾಸ್ಟ್ ಆಗಿದೆ. ಈ ವೇಳೆ ಎಚ್ಚೆತ್ತುಕೊಂಡ ಪೈಲೆಟ್ ಲ್ಯಾಂಡಿಂಗ್ ಆಗುತ್ತಿದ್ದ ವಿಮಾನವನ್ನು ಮತ್ತೆ ಟೇಕ್ ಆಫ್ ಮಾಡಿ ಮತ್ತೊಮ್ಮೆ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದಾರೆ.
ಇದೇ ವಿಮಾನದ ಮೂಲಕ ಹುಬ್ಬಳ್ಳಿಯಿಂದ 18 ಜನರು ಬೆಂಗಳೂರಿಗೆ ಪ್ರಯಾಣ ಮಾಡಬೇಕಾಗಿತ್ತು. ಆದರೆ ಟಯರ್ ಬ್ಲಾಸ್ಟ್ ಹಿನ್ನೆಲೆಯಲ್ಲಿ ವಿಮಾನ ಪ್ರಯಾಣವನ್ನ ರದ್ದು ಗೊಳಿಸಲಾಗಿದ್ದು, ಕಣ್ಣೂರಿನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಖಾಸಗಿ ಹೊಟೇಲ್ ನಲ್ಲಿ ವ್ಯವಸ್ಥೆ ಮಾಡಲಾಗಿದೆ.
ಇನ್ನೂ ಈ ಘಟನೆ ಬಗ್ಗೆ ಡಿಜಿಸಿಎ ತಂಡ ಇಂದು ಪರಿಶೀಲನೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.










