ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸದಂತೆ ತಡೆಯಾಜ್ಞೆ ಹೊರಡಿಸಿದ ಹೈಕೋರ್ಟ್..!

90
firstsuddi

ಬೆಂಗಳೂರು : ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸದಂತೆ ಹೈಕೋರ್ಟ್ ತಡೆಯಾಜ್ಞೆ ಹೊರಡಿಸಿದೆ. ಪ್ರಸಕ್ತ ಸಾಲಿನ 5.92 ಲಕ್ಷ ದ್ವಿತೀಯ ಪಿಯು ವಿದ್ಯಾರ್ಥಿಗಳು ಹಾಗೂ 76 ಸಾವಿರ ರಿಪೀಟರ್ಸ್ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ವಿಚಾರವಾಗಿ ಸೂಕ್ತ ತೀರ್ಮಾನ ಕೈಗೊಳ್ಳುವ ಬಗ್ಗೆ 12 ಮಂದಿ ತಜ್ಞರ ಸಮಿತಿ ರಚಿಸಲಾಗಿದೆ. ತಜ್ಞರ ಸಮಿತಿ 15 ದಿನಗಳಲ್ಲಿ ವರದಿ ನೀಡಲಿದೆ. ಹೀಗಾಗಿ ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸದಂತೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ನ್ಯಾಯಾಲಯವು ಎಲ್ಲಾ ವರ್ಗದ ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ಸಮತೋಲನದಲ್ಲಿಟ್ಟು ರಿಪೀಟರ್ಸ್ ಹಾಗೂ ಸಾಮಾನ್ಯ ವಿದ್ಯಾರ್ಥಿಗಳ ಮಧ್ಯೆ ತಾರತಮ್ಯ ಮಾಡುವುದು ಬೇಡ. ಎಲ್ಲರಿಗೂ ಒಂದೇ ರೀತಿಯ ನಿರ್ಣಯ ಕೈಗೊಳ್ಳುವುದು ಸೂಕ್ತ. ಸರ್ಕಾರ ಸಮಗ್ರವಾಗಿ ನಿರ್ಣಯ ಕೈಗೊಳ್ಳುವವರೆಗೆ ದ್ವಿತೀಯ ಪಿಯು ಫಲಿತಾಂಶವನ್ನು ಪ್ರಕಟಿಸಬಾರದು ಎಂದು ಮಧ್ಯಂತರ ಆದೇಶ ನೀಡಿ, ವಿಚಾರಣೆಯನ್ನು ಜುಲೈ 5ಕ್ಕೆ ಮುಂದೂಡಿದೆ.