ಮಹಿಳೆಯರು ತುಂಡುಡುಗೆ ಧರಿಸುವುದರಿಂದಲೇ ಅತ್ಯಾಚಾರ ಹೆಚ್ಚಾಗಲು ಕಾರಣ– ಇಮ್ರಾನ್ ಖಾನ್.

85
firstsuddi

ಇಸ್ಲಾಮಾಬಾದ್ : ಮಹಿಳೆಯರು ತೊಡುವ ಉಡುಗೆಗಳೇ ಅತ್ಯಾಚಾರ ಪ್ರಕರಣ ಹೆಚ್ಚಾಗಲು ಕಾರಣ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಸಂದರ್ಶನವೊಂದರಲ್ಲಿ ಇಮ್ರಾನ್ ಖಾನ್ ಅವರು ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಮಹಿಳೆಯರು ಮೈಮೇಲೆ ಕಡಿಮೆ ಬಟ್ಟೆ ಧರಿಸಿದರೆ ಅದು ಪುರುಷನ ಮೇಲೆ ಪ್ರಭಾವ ಬೀರುತ್ತದೆ. ಯಾಕೆಂದರೆ ಪುರುಷರೇನೂ ರೋಬೋಟ್ ಗಳಲ್ಲ. ಮಹಿಳೆಯರು ತುಂಡು ಬಟ್ಟೆ ತೊಟ್ಟರೆ ಪುರುಷರಿಗೆ ಸಹಜವಾಗಿಯೇ ಪ್ರಚೋದನೆ ಆಗುತ್ತದೆ. ಇದು ಕಾಮನ್ ಸೆನ್ಸ್ ಎಂದು ಹೇಳಿಕೆ ನೀಡಿದ್ದಾರೆ.

ಇದೀಗ ಇಮ್ರಾನ್ ಅವರ ಹೇಳಿಕೆಗೆ ಜಾಗತಿಕ ಮಟ್ಟದಲ್ಲಿ ಭಾರಿ ಟೀಕೆಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ ದಕ್ಷಿಣ ಏಷ್ಯಾ ನ್ಯಾಯಶಾಸ್ತ್ರಜ್ಞರ ಅಂತರರಾಷ್ಟ್ರೀಯ ಆಯೋಗದ ಕಾನೂನು ಸಲಹೆಗಾರ್ತಿ ಆಗಿರುವ ರೀಮಾ ಓಮರ್ ಟ್ವೀಟ್ ಮಾಡಿದ್ದು ಸಂತ್ರಸ್ತೆಯನ್ನು ದೂಷಿಸುವ ಪಾಕ್ ಪ್ರಧಾನಿ ಇಮ್ರಾನ್ ನಡೆ ನಿರಾಶಾದಾಯಕವಾಗಿದೆ ಎಂದು ಹೇಳಿ ಆಕ್ರೋಶ ಹೊರಹಾಕಿದ್ದಾರೆ.