ಮೈಸೂರು : ಸಿಎಂ ರೇಸ್ ವಿಚಾರ ಸಮಯ ಬಂದಾಗ ಹೇಳುತ್ತೇನೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಹೇಳಿದರು.
ಇಂದು ಸುತ್ತೂರು ಶಾಖಾಮಠಕ್ಕೆ ಆಗಮಿಸಿದ ಡಾ. ಜಿ. ಪರಮೇಶ್ವರ್ ಅವರು ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆರ್ಶೀವಾದ ಪಡೆದು ಶ್ರೀಗಳ ಪೂರ್ವಾಶ್ರಮದ ತಾಯಿ ತೀರಿಕೊಂಡಿದ್ದರು. ಆದ್ದರಿಂದ ಶ್ರೀಗಳನ್ನು ಮಾತನಾಡಿಸಲು ಬಂದಿದ್ದೆ. ಇದರ ಹೊರತಾಗಿ ಭೇಟಿಯ ಹಿಂದೆ ಇನ್ಯಾವುದೇ ಉದ್ದೇಶವಿಲ್ಲ ಎಂದು ಹೇಳಿದರು.
ಇದೇ ವೇಳೆ ನೀವು ಸಿಎಂ ರೇಸ್ ನಲ್ಲಿ ಇದ್ದೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಆ ಸಮಯ, ಸಂದರ್ಭ ಬಂದಾಗ ಹೇಳುತ್ತೇನೆ ಎಂದು ಮಾರ್ಮಿಕವಾಗಿ ಉತ್ತರಿಸಿದರಲ್ಲದೆ, ಭಾವಿ ಸಿಎಂ ಎಂದು ಘೋಷಣೆ ಕೂಗಿದ ಕಾರ್ಯಕರ್ತರಿಗೆ ಆ ರೀತಿ ಕೂಗದಂತೆ ಹೇಳಿದ್ದೇನೆ. ಚುನಾವಣೆಗೆ ಎರಡು ವರ್ಷ ಇದೆ. ಹೀಗಾಗಿ ಈಗಲೇ ಈ ವಿಚಾರದಲ್ಲಿ ಚರ್ಚೆ ನಡೆಸುವುದು ಸರಿಯಲ್ಲ. ಚುನಾವಣೆಗೆ ಹೋಗಿ ಗೆದ್ದು, ಬಹುಮತ ಬಂದಮೇಲೆ ಶಾಸಕಾಂಗ ಸಭೆ ನಡೆಸಿ ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲಾ ಬದ್ದರಾಗಿರುತ್ತೇವೆ. ಹೈಕಮಾಂಡ್ ಸಿಎಂ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತಾರೆ ಎಂದು ಹೇಳಿದರು.