ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,698 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,01,83,143ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 1,183 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 3,94,493 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,01,83,143 ಮಂದಿ ಸೋಂಕಿತರ ಪೈಕಿ ಈವರೆಗೆ 2,91,93,085 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










