ಬೆಂಗಳೂರು : ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಸ್ಟೀಫನ್, ಅಜಯ್, ಪುರುಷೋತ್ತಮ್ ಬಂಧಿತ ಆರೋಪಿಗಳು. ಮೃತ ರೇಖಾ ಅವರ ಸಂಬಂಧಿ ಸಂಜಯ್ ನೀಡಿದ ದೂರಿನ ಮೇರೆಗೆ ಎಫ್ ಐಆರ್ ದಾಖಲಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಪೊಲೀಸರು ನಿನ್ನೆ ಮಧ್ಯಾಹ್ನ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ನಿನ್ನೆ ತಡರಾತ್ರಿ ಮೂವರನ್ನು ಬಂಧಿಸಲಾಗಿದೆ. ಇದೀಗ ಘಟನೆ ಸಂಬಂಧ ಒಟ್ಟು ಐವರು ಆರೋಪಿಗಳನ್ನು ಬಂಧಿಸಿದಂತಾಗಿದೆ.
ಸ್ಟೀಫನ್ ಇಡೀ ಪ್ರಕರಣದ ಪ್ಲಾನ್ ಮಾಡಿದ್ದು, ಎಲ್ಲ ಆರೋಪಿಗಳ ಜೊತೆ ಸಂಪರ್ಕ ಹೊಂದಿದ್ದ ಎಂದು ಡಿಸಿಪಿ ಸಂಜೀವ್ ಪಾಟೀಲ್ ಅವರು ತಿಳಿಸಿದ್ದಾರೆ.










