ನವದೆಹಲಿ : ದೇಶದಲ್ಲಿ ಮತ್ತೆ ತೈಲ ಬೆಲೆ ಏರಿಕೆಯಾಗಿದ್ದು ಇಂದು ಪೆಟ್ರೋಲ್ ಪ್ರತಿ ಲೀಟರ್ಗೆ 31-35 ಪೈಸೆ ಹಾಗೂ ಡೀಸೆಲ್ ಲೀಟರ್ ಗೆ 26-30 ಪೈಸೆ ಹೆಚ್ಚಿಸಲಾಗಿದೆ. ಹೀಗಾಗಿ ಪ್ರಮುಖ ನಗರಗಳಲ್ಲಿ ಇಂಧನ ದರ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ. ಮೇ ತಿಂಗಳಿನಿಂದ ಏರಿಕೆ ಕಾಣಲು ಆರಂಭಿಸಿದ ಪೆಟ್ರೋಲ್, ಡೀಸೆಲ್ ಬೆಲೆ ಇಲ್ಲಿಯವರೆಗೆ 32 ಬಾರಿ ಏರಿಕೆ ಕಂಡಿದ್ದು, ವಾಹನ ಸವಾರರಿಗೆ ತೈಲ ಬೆಲೆಯ ಬಿಸಿ ತಟ್ಟಿದೆ.
ವಾಣಿಜ್ಯ ನಗರಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 104.90ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 96.72 ರೂ ಗೆ ಏರಿಕೆಯಾಗಿದೆ. ಕೋಲ್ಕತಾದಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 98.64 ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 92.03 ರೂ ಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 99.80 ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 93.72 ರೂ ಗೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 98.81 ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 89.18 ರೂ ಗೆ ಏರಿಕೆಯಾಗಿದೆ.
ಇನ್ನೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೊಸ ದಾಖಲೆ ಬರೆದಿರುವ ಪೆಟ್ರೋಲ್ ಪ್ರತೀ ಲೀಟರ್ ಗೆ 102.11ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 94.54 ರೂ ಗೆ ಏರಿಕೆಯಾಗಿದೆ.










