ಅಕ್ರಮ ಸಂಬಂಧ ಅಡ್ಡಿಪಡಿಸಿದ್ದಕ್ಕೆ ಅತ್ತೆಯನ್ನೇ ಕೊಲೆ ಮಾಡಿದ್ದ ಸೊಸೆ – ಪ್ರಿಯಕರ ಬಂಧನ…

108
firstsuddi

ತುಮಕೂರು : ಅಕ್ರಮ ಸಂಬಂಧಕ್ಕೆ ಅಡ್ಡಿಪಡಿಸಿದ ಅತ್ತೆಯನ್ನೇ ಕೊಲೆ ಮಾಡಿದ್ದ ಸೊಸೆ ಹಾಗೂ ಆಕೆಯ ಪ್ರಿಯಕರನನ್ನು ಬಂಧಿಸಲಾಗಿದೆ. ಶಿರಾ ತಾಲ್ಲೂಕು ಗೌಡಗೆರೆ ಹೋಬಳಿ ಉಜ್ಜನಕುಂಟೆ ಗ್ರಾಮದ ಸುಧಾಮಣಿ(28) ಹಾಗೂ ಆಕೆಯ ಪ್ರಿಯಕರ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕು ಜವಗೊಂಡನಹಳ್ಳಿ ಹೋಬಳಿಯ ಎಳನೀರು ವ್ಯಾಪಾರಿ ಶ್ರೀರಂಗಪ್ಪ(35) ಬಂಧಿತರು. ಕಳೆದ ಜೂನ್ 14ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಸುಧಾರಣಿಯು ಶ್ರೀರಂಗಪ್ಪ ಎಂಬಾತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಇದೇ ವಿಚಾರವಾಗಿ ಅತ್ತೆ ಸರೋಜಮ್ಮ ತನ್ನ ಸೊಸೆಯೊಂದಿಗೆ ಜಗಳ ಮಾಡಿ ವಿರೋಧ ವ್ಯಕ್ತಪಡಿಸಿದ್ದಳು. ಇದರಿಂದ ಕೋಪಗೊಂಡ ಸುಧಾಮಣಿ ತನ್ನ ಅತ್ತೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ. ಬಳಿಕ ಅನುಮಾನ ಬಂದ ಪೊಲೀಸರು ಸುಧಾಮಣಿ ಮತ್ತು ಶ್ರೀರಂಗಪ್ಪನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಸತ್ಯಾಂಶ ಹೊರಬಿದ್ದಿದೆ. ಈಗ ಈ ಇಬ್ಬರೂ ಆರೋಪಿಗಳು ಜೈಲು ಪಾಲಾಗಿದ್ದಾರೆ. ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.