ಮೂಡಿಗೆರೆ : ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಗೆ ಅರ್ಜಿ ಆಹ್ವಾನ…

122
firstsuddi

ಮೂಡಿಗೆರೆ : ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ರಾಜ್ಯ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ವಿಮಾ ಯೋಜನೆಯಡಿಯಲ್ಲಿ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಬಣಕಲ್ ಕೃಷಿ ಸಹಾಯಕ ಅದಿಕಾರಿ ವೆಂಕಟೇಶ್ ತಿಳಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಬಣಕಲ್ ಹೋಬಳಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಳವಡಿಸಿ ಅನುಷ್ಠಾನಗೊಳಿಸಲು ಆಯ್ದ ಬೆಳೆಗಳಿಗೆ ಸಹಾಯಕ ಕೃಷಿ ನಿರ್ದೇಶಕಿ ಸುಮಾ ಮಂಜೂರಾತಿ ನೀಡಿದ್ದಾರೆ. ಜಿಲ್ಲೆಗೆ ಬಜಾಜ್ ರಿಲಯನ್ಸ್ ಜನರಲ್ ಇನ್ಸುರೆನ್ಸ್ ಸಂಸ್ಥೆಯನ್ನು ಪ್ರಸಕ್ತ ಸಾಲಿಗೆ ಮುಂಗಾರು ಹಂಗಾಮಿನ ಅನುಷ್ಠಾನ ಸಂಸ್ಥೆಯಾಗಿ ಆಯ್ಕೆ ಮಾಡಲಾಗಿದ್ದು, ಬೆಳೆ ಸಾಲ ಪಡೆದ ಹಾಗೂ ಪಡೆಯದ ಆಸಕ್ತ ರೈತರು ಅಂತಿಮ ದಿನದೊಳಗೆ ತಮ್ಮ ವ್ಯಾಪ್ತಿಯ ಬ್ಯಾಂಕ್ ಗಳಲ್ಲಿ ಅರ್ಜಿಯೊಂದಿಗೆ ಫಹಣಿ, ಆಧಾರ್, ಮೊಬೈಲ್ ಸಂಖ್ಯೆ ನೀಡಿ ನೊಂದಾಯಿಸಬೇಕು. ಮೂಡಿಗೆರೆ ತಾಲ್ಲೂಕಿಗೆ ಭತ್ತ (ಮಳೆ ಆಶ್ರಿತ) ಬೆಳೆಯನ್ನು ವಿಮೆಗೆ ಅಧಿಸೂಚಿಸಲಾಗಿದೆ. ರೈತರು ಈ ಯೋಜನೆಗೆ ನೊಂದಾಯಿಸಲು ಆಗಸ್ಟ್ 16 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಗಳು ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.