ಡಿಆರ್ ಡಿಒ ಮಾಜಿ ವಿಜ್ಞಾನಿ, ವಿಜ್ಞಾನ ಬರಹಗಾರ ಸುಧೀಂದ್ರ ಹಾಲ್ದೊಡ್ಡೇರಿ ಇನ್ನಿಲ್ಲ…

76
firstsuddi

ಬೆಂಗಳೂರು : ಡಿಆರ್ ಡಿಒ ಮಾಜಿ ವಿಜ್ಞಾನಿ, ಹೆಚ್ಎಎಲ್ ಇಂಜಿನಿಯರ್ ಹಾಗೂ ವಿಜ್ಞಾನ ಬರಹಗಾರ ಸುಧೀಂದ್ರ ಹಾಲ್ದೊಡ್ಡೇರಿ (61) ಅವರು ನಿಧನರಾಗಿದ್ದಾರೆ.

ವಾರದ ಹಿಂದೆ ತೀವ್ರ ಹೃದಯಾಘಾತದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಮಧ್ಯಾಹ್ನ ಮೃತಪಟ್ಟಿದ್ದಾರೆ.
ಸುಧೀಂದ್ರ ಹಾಲ್ದೊಡ್ಡೇರಿ ಅವರ ಮೆದುಳಿಗೆ ಆಮ್ಲಜನಕ ಪೂರೈಕೆಯಾಗುವುದು ಸ್ಥಗಿತಗೊಂಡಿದ್ದರಿಂದ ಅವರ ಮೆದುಳು ನಿಷ್ಕ್ರಿಯಗೊಂಡಿತ್ತು. ಈ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ದೇಹದಾನಕ್ಕೆ ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸುಧೀಂದ್ರ ಹಾಲ್ದೊಡ್ಡೇರಿ ಅವರು ಹಲವು ಪತ್ರಿಕೆಗಳಿಗೆ ವಿಜ್ಞಾನ ಅಂಕಣಗಳನ್ನು ಬರೆಯುತ್ತಿದ್ದರು. ಅಲ್ಲದೇ ಕನ್ನಡ ಪುಸ್ತಕ ಪ್ರಾಧಿಕಾರದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿ ಇಂದು ಪ್ರಕಟಗೊಂಡಿತ್ತು. ಅನುಪಮ ನಿರಂಜನ ವೈದ್ಯಕೀಯ, ವಿಜ್ಞಾನ ಸಾಹಿತ್ಯ ಪ್ರಶಸ್ತಿಗೆ ಸುಧೀಂದ್ರ ಹಾಲ್ದೊಡ್ಡೇರಿ ಅವರನ್ನು ಆಯ್ಕೆ ಮಾಡಲಾಗಿತ್ತು.