ವಿಜಯೇಂದ್ರನೇ ಡಿ ಫ್ಯಾಕ್ಟರ್ ಸಿಎಂ. ಯಡಿಯೂರಪ್ಪ ಡಿ ಜೀರೋ ಸಿಎಂ : ವಿಪಕ್ಷ ನಾಯಕ ಸಿದ್ದರಾಮಯ್ಯ.

75
firstsuddi

ದಾವಣಗೆರೆ : ವಿಜಯೇಂದ್ರನೇ ಡಿ ಫ್ಯಾಕ್ಟರ್ ಸಿಎಂ, ಯಡಿಯೂರಪ್ಪ ಡಿ ಜೀರೋ ಸಿಎಂ ಎಂದು ವಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಸರ್ಕಾರ 20-25 ಪರ್ಸೆಂಟ್ ಸರ್ಕಾರ. ಲಂಚ ಇಲ್ಲದೆ ಏನೂ ಆಗುತ್ತಿಲ್ಲ. ಭ್ರಷ್ಟಚಾರ ಮಾಡುತ್ತಿರುವುದು ಸತ್ಯ. ಯಡಿಯೂರಪ್ಪ ಅವರ ಮಗ ಹಾಗೂ ಅಳಿಯ ಬ್ಯಾಂಕ್ ಮುಖಾಂತರ ಲಂಚ ತೆಗೆದುಕೊಳ್ಳುತ್ತಿದ್ದಾರೆ. ಯಡಿಯೂರಪ್ಪ ಅವರ ಕುಟುಂಬ ಭ್ರಷ್ಟಾಚಾರದಲ್ಲಿ ಮುಳುಗಿದೆ. ಸರ್ಕಾರದಲ್ಲಿ ಲಂಚ ಇರುವುದು ಸತ್ಯ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ವಂಚನೆ ಹಾಗೂ ಭ್ರಷ್ಟಾಚಾರ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ಸಮಾಜ ಕಲ್ಯಾಣ ಸಚಿವರ ಪಿಎ ಅರೆಸ್ಟ್ ಆಗಿದ್ದಾರೆ. ಯಡಿಯೂರಪ್ಪನವರ ಮಗ ಕಂಪ್ಲೇಂಟ್ ಮಾಡಿದ್ದಾರೆ. ಈ ಬಗ್ಗೆ ತನಿಖೆಯಾಗಬೇಕು. ಇಡೀ ಸರ್ಕಾರದಲ್ಲಿ ಲಂಚ ಇಲ್ಲದೆ ಏನೂ ಕೆಲಸ ಆಗೋದಿಲ್ಲ ಎಂದರು. ಇದೇ ವೇಳೆ ಸಿದ್ದರಾಮಯ್ಯನವರ ಪಾಪದ ಕೊಡ ತುಂಬಿದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಸುಳ್ಳು ಹೇಳ್ತಾ ಹೋಗ್ತಾರೆ. ಅವರೇನು ನಮ್ಮ ಪಕ್ಷದವರಾ?, ಅವರು ಹೇಳಿದ್ದೆಲ್ಲ ವೇದವಾಕ್ಯ ಅಲ್ಲ. ನಮ್ಮ ಪಕ್ಷದಲ್ಲಿ ಯಾವುದೇ ಜಗಳ, ಗುಂಪುಗಾರಿಕೆ ಇಲ್ಲ. ಎಲ್ಲರೂ ಒಗ್ಗಟ್ಟಾಗಿದ್ದೇವೆ. ಚುನಾವಣೆ ಆದ ಮೇಲೆ ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದರು.