ಮೂಡಿಗೆರೆ ಬಿಜೆಪಿ ಯುವ ಮೋರ್ಚಾ ವತಿಯಿಂದ ವೃಕ್ಷ ರೋಹಣ ಕಾರ್ಯಕ್ರಮ…

101
firstsuddi

ಮೂಡಿಗೆರೆ :  ಬಿಜೆಪಿ ಯುವ ಮೋರ್ಚಾ ವತಿಯಿಂದ ತಾಲ್ಲೂಕಿನ ಬಿದರಹಳ್ಳಿ ಮೊರಾರ್ಜಿ ಶಾಲೆಯ ಆವರಣದಲ್ಲಿ ಗಿಡ ನೆಡುವ ಮೂಲಕ ಜನಸಂಘದ ಸಂಸ್ಥಾಪಕ ದಿವಂಗತ ಶ್ಯಾಮ್ ಪ್ರಸಾದ್ ಮುಖರ್ಜಿಯವರ ಸ್ಮರಣಾರ್ಥ ವೃಕ್ಷ ರೋಹಣ ಕಾರ್ಯಕ್ರಮವನ್ನು ಆಚರಿಸಲಾಯಿತು.

ಈ ವೇಳೆ  ಉಪಸಭಾಪತಿಗಳಾದ ಎಂ.ಕೆ. ಪ್ರಾಣೇಶ್ ಅವರು ಸಸಿ ನೆಡುವುದರ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ದೇಶದ ಬಗ್ಗೆ ಕಾಳಜಿ ಹಾಗೂ ವಿಶಿಷ್ಟ ಆಲೋಚನೆ ಮಾಡುವ ರಾಷ್ಟ್ರೀಯ ಪಕ್ಷ ಬಿಜೆಪಿ. ಗಿಡ ನೆಡುವುದು ಮಾತ್ರವಲ್ಲ ಅವುಗಳನ್ನು ಪೋಷಿಸಿ, ಸಂರಕ್ಷಿಸುವ ಕೆಲಸ ಮಾಡಬೇಕು, ಯುವ ಮೋರ್ಚಾ ಇನ್ನು ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಇದೇ ಸಂದರ್ಭದಲ್ಲಿ ನಿಯೋಜಿತ ಮೂಡಿಗೆರೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಅವಿನಾಶ್ ಜನ್ನಾಪುರ ಅವರಿಗೆ ಅಭಿನಂದನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮನೋಜ್ ಹಳೆಕೋಟೆ, ರಾಜ್ಯ ಬಿಜೆಪಿ ಕಾರ್ಯ ಕಾರಿಣಿ ಸದಸ್ಯ ಧನಿಕ್ ಕೊಡದಿಣ್ಣೆ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಸಂಜಯ್ ಕೊಟ್ಟಿಗೆಹಾರ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಪಂಚಾಕ್ಷರಿ ಹಾಲೂರು, ಕಸಬಾ ಹೋಬಳಿ ಯುವ ಮೋರ್ಚಾ ಅಧ್ಯಕ್ಷ ಪ್ರಶಾಂತ್ ಬಿಳಗುಳ, ಕಸಬಾ ಹೋಬಳಿ ಯುವ ಮೋರ್ಚಾ ಅಧ್ಯಕ್ಷ ವಿಶ್ವ ಮಗ್ರಹಳ್ಳಿ, ಸಚಿನ್ ಬಾನಹಳ್ಳಿ,  ನಯನ್ ಊರುಬಗೆ  ಇದ್ದರು.