ಕಾರಿನ ಮೇಲೆ ಕಾಡಾನೆ ದಾಳಿ – ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು!

107
firstsuddi

ಹಾಸನ : ಚಲಿಸುತ್ತಿದ್ದ ಕಾರಿನ ಮೇಲೆ ಕಾಡಾನೆಯೊಂದು ದಾಳಿ ಮಾಡಿದ ಹಿನ್ನಲೆ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರಾಗಿದ್ದಾರೆ. ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹಲಸುಲಿಗೆ ಗ್ರಾಮದ ಬಳಿ ಘಟನೆ ನಡೆದಿದ್ದು, ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ಚೈತ್ರಾ ಅವರು ಮಗನ ಜೊತೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಕಾಡಾನೆ ಕಾರನ್ನು ಕಂಡು ಏಕಾಏಕಿ ದಾಳಿ ನಡೆಸಿದೆ. ಕಾರಿನಿಂದ ಇಳಿದು ಓಡಿಹೋದ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನ ಮುಂಭಾಗವನ್ನು ತನ್ನ ಸೊಂಡಿಲಿನಿಂದ ಜಖಂಗೊಳಿಸಿದೆ.

ಕಾಡಾನೆಯ ಅಟ್ಟಹಾಸಕ್ಕೆ ಮಲೆನಾಡಿಗರು ಬೆಚ್ಚಿಬಿದ್ದಿದ್ದು, ಪುಂಡಾನೆಗಳನ್ನು ಸ್ಥಳಾಂತರಿಸಬೇಕು ಎಂದು ಅರಣ್ಯ ಅಧಿಕಾರಿಗಳಿಗೆ ಒತ್ತಾಯ ಮಾಡಿದ್ದಾರೆ.