ಮನೆ ಗೋಡೆ ಕುಸಿದು ಮೂರು ವರ್ಷದ ಬಾಲಕ ಸಾವು…

78
firstsuddi

ಚಿತ್ರದುರ್ಗ : ಮನೆಯ ಗೋಡೆ ಕುಸಿದ ಪರಿಣಾಮ ಮೂರು ವರ್ಷದ ಬಾಲಕನೋರ್ವ ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಕೆಲ್ಲೋಡು ಗ್ರಾಮದಲ್ಲಿ ನಡೆದಿದೆ.

ಮಳೆಯಿಂದಾಗಿ ನೆನೆದಿದ್ದ ಹಳೇ ಮನೆ ಗೋಡೆ ರಾತ್ರಿ ವೇಳೆ ಮಲಗಿದ್ದ ಬಾಲಕ ಲೋಹಿತ್ (3) ಮೇಲೆ ಕುಸಿದಿದೆ. ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಗುವಿನ ಜೊತೆ ತಂದೆ ಓಂಕಾರಪ್ಪ ಹಾಗೂ ತಾಯಿ ಸಾವಿತ್ರಮ್ಮ ಸಹ ಇದ್ದರು. ಆದರೆ ಅದೃಷ್ಟವಶಾತ್ ಇಬ್ಬರೂ ಸಹ ಪ್ರಾಣಾಪಾಯದಿಂದ ಪಾರಾಗಿದ್ದೂ, ಸದ್ಯ ಹೆಚ್ಚಿನ ಚಿಕಿತ್ಸೆ ಗಾಗಿ ದಾವಣಗೆರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪ್ರಕರಣ ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.