ಯೋಗೀಶ್ ಗೌಡ ಕೊಲೆ ಪ್ರಕರಣ : ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ಬಂಧನ…

85
firstsuddi

ಧಾರವಾಡ : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಸ್ಥಳೀಯ ಬಿಜೆಪಿ ನಾಯಕರಾಗಿದ್ದ ಯೋಗೇಶ್ ಗೌಡ ಅವರನ್ನು 2016ರ ಜೂನ್ 15ರಂದು ಸಪ್ತಾಪುರದಲ್ಲಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ಅಧಿಕಾರಿ ಸೋಮು ನ್ಯಾಮಗೌಡ ಯೋಗೀಶ್ ಗೌಡ ಕೊಲೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಮಾಜಿ ಆಪ್ತ ಸಹಾಯಕರಾಗಿದ್ದಾರೆ. ಸಿಬಿಐ ಅಧಿಕಾರಿಗಳು ಸೋಮು ನ್ಯಾಮಗೌಡ ಅವರನ್ನು ಗದಗದಲ್ಲಿ ಬಂಧಿಸಿದ್ದು, ಧಾರವಾಡ ಉಪನಗರ ಠಾಣೆಗೆ ಕರೆತಂದಿದ್ದಾರೆ. ಪ್ರಸ್ತುತ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಬೆಳಗಾವಿ ಜೈಲಿನಲ್ಲಿದ್ದಾರೆ.