ಬೆಂಗಳೂರು : ಸ್ಯಾಂಡಲ್ ವುಡ್ ನ ನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಅವರು ನಿಧನರಾಗಿದ್ದಾರೆ. ಈ ಬಗ್ಗೆ ದುನಿಯಾ ವಿಜಯ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಕೋವಿಡ್ ನಿಂದ ದುನಿಯಾ ವಿಜಯ್ ಪೋಷಕರು ಚೇತರಿಸಿಕೊಂಡಿದ್ದರು. ಇನ್ನೇನು ಸಮಸ್ಯೆ ಬಗೆಹರಿಯಿತು ಎನ್ನುತ್ತಿರುವಾಗಲೇ ಮತ್ತೆ ವಿಜಯ್ ಅವರ ತಾಯಿಯ ಆರೋಗ್ಯ ಹದಗೆಟ್ಟಿತ್ತು. ಬ್ರೇನ್ ಸ್ಟ್ರೋಕ್ ಆಗಿದ್ದ ಕಾರಣದಿಂದ ಮನೆಯಲ್ಲಿಯೇ ಚಿಕಿತ್ಸೆಗಾಗಿ ದುನಿಯಾ ವಿಜಯ್ ವ್ಯವಸ್ಥೆ ಮಾಡಿದ್ದರು. ಕಳೆದ 23 ದಿನದಿಂದ ವೈದ್ಯರು ಮನೆಗೆ ಆಗಮಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆ. ಆನೇಕಲ್ ನ ಕುಂಬಾರ ಹಳ್ಳಿಯಲ್ಲಿ ನಾಳೆ ಮಧ್ಯಾಹ್ನ ನಾರಾಯಣಮ್ಮ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.










