ಕಲಬುರಗಿ : ಜುಲೈ 15ರವರೆಗೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಪ್ರವಾಹ ಪರಿಸ್ಥಿತಿ ಹಿನ್ನೆಲೆ ಎಚ್ಚರಿಕೆಯಿಂದರಲು ಜಿಲ್ಲಾಡಳಿತ ಸೂಚನೆಯನ್ನು ನೀಡಿದೆ.
ಜಿಲ್ಲೆಯಲ್ಲಿ ಭಾರೀ ಮಳೆ ಉಂಟಾಗುವ ಸಂಭವ ಹಿನ್ನೆಲೆ ಜುಲೈ 8 ರಿಂದ 15ರವರೆಗೆ ಜಿಲ್ಲೆಯಾದ್ಯಂತ ಹೈಅಲರ್ಟ್ ಘೋಷಣೆ ಮಾಡಿದ್ದು, ಗ್ರಾಮೀಣ ಭಾಗದ ನದಿ ಪಾತ್ರದ ಹಳ್ಳಿಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇರುವುದರಿಂದ ಹಳ್ಳಿಗಳಲ್ಲಿ ಟಾಸ್ಕ್ ಪೋರ್ಸ್ ತಂಡಗಳನ್ನು ರಚಿಸಿ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡದಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವಿ. ವಿ. ಜ್ಯೋತ್ಸ್ನಾ ಅವರು ಸೂಚನೆ ನೀಡಿದ್ದಾರೆ.










