ಕೆ-ಸೆಟ್ ಪರೀಕ್ಷೆ ದಿನಾಂಕ ನಿಗದಿ ; ಜುಲೈ 25ರಂದು ಪರೀಕ್ಷೆ…

104
firstuddi

ಮೈಸೂರು : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಯನ್ನು ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಆದರೆ ಇದೀಗ ಪರೀಕ್ಷೆಗೆ ದಿನಾಂಕ ನಿಗದಿಯಾಗಿದೆ.

ಮೈಸೂರು ವಿಶ್ವವಿದ್ಯಾಲಯ, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು ಜುಲೈ 25ರ ಭಾನುವಾರ ನಡೆಸಲು ತೀರ್ಮಾನಿಸಲಾಗಿದ್ದು, ಕೆಸೆಟ್ 2021ರ ಪರೀಕ್ಷೆಗೆ ಸಂಬಂಧಿಸಿದಂತೆ ಕೆಸೆಟ್ ವೈಬ್ ಸೈಟ್ ನಲ್ಲಿ (http://kset.uni.mysore.ac.in/)  ಹೆಚ್ಚಿನ ಮಾಹಿತಿ ಪಡೆಯಬಹುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.