ಹ್ಯಾಟ್ರಿಕ್ ಹೀರೋ ಶಿವಣ್ಣಗೆ 59ನೇ ಹುಟ್ಟುಹಬ್ಬದ ಸಂಭ್ರಮ…

89
firstsuddi

ಬೆಂಗಳೂರು : ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಗೆ ಇಂದು ಜನ್ಮದಿನದ ಸಂಭ್ರಮ. 59ನೇ ವಸಂತಕ್ಕೆ ಕಾಲಿಟ್ಟಿರುವ ಶಿವರಾಜ್ ಕುಮಾರ್ ರವರು ಕೊರೊನಾದಿಂದಾಗಿ ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಈ ವಿಶೇಷ ದಿನದಂದು ಶಿವರಾಜ್ ಕುಮಾರ್ ರವರಿಗೆ ಗಣ್ಯಾತಿ ಗಣ್ಯರು ಸೋಶಿಯಲ್ ಮೀಡಿಯಾದ ಮೂಲಕ ವಿಶ್ ಮಾಡುತ್ತಿದ್ದಾರೆ. ಜೊತೆಗೆ ಶಿವರಾಜ್ ಕುಮಾರ್ ಅವರಿಗೆ ಆರೋಗ್ಯ, ಐಶ್ವರ್ಯ ಕೊಟ್ಟು ಕಾಪಾಡಲಿ ಎಂದು ಕಿಚ್ಚ ಸುದೀಪ್ ಅವರು ಸಹ ಶುಭ ಹಾರೈಸಿದ್ದಾರೆ.

ಶಿವರಾಜ್ ಕುಮಾರ್ ಅವರು ಇಲ್ಲಿಯವರೆಗೂ 120ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದು, ಸದ್ಯ ನೃತ್ಯ ನಿರ್ದೇಶಕ ಭಜರಂಗಿ-2 ಸಿನಿಮಾದಲ್ಲಿ ಶಿವರಾಜ್ ಕುಮಾರ್ ರವರು ಬ್ಯೂಸಿಯಾಗಿದ್ದಾರೆ.

ಇತ್ತೀಚೆಗಷ್ಟೇ ಶಿವರಾಜ್ ಕುಮಾರ್ ರವರು ನನ್ನ ಹುಟ್ಟುಹಬ್ಬಕ್ಕಿಂತ ನಿಮ್ಮೆಲ್ಲರ ಆರೋಗ್ಯ ನನಗೆ ಮುಖ್ಯ. ನಿಮಗೆಲ್ಲರಿಗೂ ಗೊತ್ತಿರುವಂತೆ ಜುಲೈ 12 ರಂದು ನನ್ನ ಹುಟ್ಟಿದ ದಿನ. ಕಾರಣಾಂತರಗಳಿಂದ ನಾನು ಬೆಂಗಳೂರಿನಲ್ಲಿ ಇರಲ್ಲ. ದಯವಿಟ್ಟು ಯಾರೂ ಬೇಜಾರು ಮಾಡಿಕೊಳ್ಳಬೇಡಿ. ಈ ಬಾರಿ ನನ್ನ ಹುಟ್ಟುಹಬ್ಬ ಆಚರಣೆ ಮಾಡಲ್ಲ. ಹೀಗಾಗಿ ಯಾರೂ ಕೂಡ ಮನೆ ಬಳಿ ಬರಬೇಡಿ ಎಂದು ಮನವಿ ಮಾಡಿದ್ದರು.