ಸಾಕು ನಾಯಿ ಸಾವು – ದುಃಖ ಹಂಚಿಕೊಂಡ ಬಸವರಾಜ್ ಬೊಮ್ಮಾಯಿ.

104
firstsuddi

ಬೆಂಗಳೂರು : ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರ ಮುದ್ದಿನ ನಾಯಿ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದು ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡುವ ಮೂಲಕ ದುಃಖವನ್ನು ಹಂಚಿಕೊಂಡಿದ್ದಾರೆ.

ಇಂದು ನಮ್ಮ ಮನೆಯ ಮುದ್ದಿನ ನಾಯಿ ‘ಸನ್ನಿ’ ವಯೋಸಹಜದಿಂದ ಸಾವನ್ನಪ್ಪಿದ್ದು ತೀವ್ರ ದುಃಖ ತಂದಿದ್ದು ಕುಟುಂಬದ ಓರ್ವ ಸದಸ್ಯನನ್ನು ಕಳೆದುಕೊಂಡಂತಾಗಿದೆ. ಮನೆಯ ಹಾಗೂ ಮನೆಗೆ ಬರುವ ಎಲ್ಲರೊಂದಿಗೆ ಅತ್ಯಂತ ಪ್ರೀತಿಯಿಂದ ಬೆರೆಯುತ್ತಿತ್ತು ಎಂದು ಟ್ವೀಟ್ ಮಾಡಿದ್ದಾರೆ.