ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 32,906 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,09,07,282ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 2,020 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,10,784ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,09,07,282 ಮಂದಿ ಸೋಂಕಿತರ ಪೈಕಿ ಈವರೆಗೆ 3,00,63,720 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










