ಬೆಂಗಳೂರು : ಕುಡಿದ ಮತ್ತಿನಲ್ಲಿ ನಡು ರಸ್ತೆಯಲ್ಲೇ ಮಹಿಳೆ ರಂಪಾಟ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.
ಜುಲೈ 11(ಭಾನುವಾರ) ರಂದು ಕಬ್ಬನ್ ಪಾರ್ಕ್ ಬಳಿ ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ನಡೆಯುತ್ತಿತ್ತು. ಈ ವೇಳೆ ಮದ್ಯ ಸೇವಿಸಿ ಬೈಕ್ ಚಲಾಯಿಸುತ್ತಿದ್ದ ಮಹಿಳೆಯನ್ನು ತಡೆದು ಪೊಲೀಸರು ಪ್ರಶ್ನಿಸಿದ್ದಾರೆ. ಮಹಿಳೆ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದ್ದು, ಸುಮಾರು 3 ಗಂಟೆಗಳ ಕಾಲ ನಡುರಸ್ತೆಯಲ್ಲೇ ರಂಪಾಟ ಮಾಡಿದ್ದಾರೆ. ಬುದ್ಧಿ ಹೇಳಲು ಬಂದ ಪೊಲೀಸರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದು, ಸ್ಥಳಕ್ಕೆ ಎಸ್ ಪಿ ಬರಬೇಕೆಂದು ಹಠ ಹಿಡಿದಿದ್ದಾಳೆ. ಹೀಗಾಗಿ ಪೊಲೀಸರು ಬೈಕ್ ಜಪ್ತಿ ಮಾಡಿ ಮಹಿಳೆಯನ್ನು ಆಟೋದಲ್ಲಿ ಕಳಿಸಿಕೊಟ್ಟಿದ್ದಾರೆ.










