ಬೆಂಗಳೂರು : ಹೋಟೆಲ್ ನಲ್ಲಿ ದಲಿತ ವೇಟರ್ ಮೇಲೆ ಸ್ಟಾರ್ ನಟರೊಬ್ಬರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಅವರು ಇಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ದೂರು ನೀಡಿದ್ದಾರೆ. ಮೈಸೂರಿನ ಸಂದೇಶ್ ನಾಗರಾಜ್ ಮಾಲೀಕತ್ವದ ಹೋಟೇಲಿನಲ್ಲಿ ಈ ಘಟನೆ ನಡೆದಿದ್ದು, ಪ್ರಕರಣದ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ಕುರಿತು ಮಾತನಾಡಿರುವ ಇಂದ್ರಜಿತ್ ಲಂಕೇಶ್ ಅವರು, ಸಂದೇಶ್ ನಾಗರಾಜ್ ಮಾಲೀಕತ್ವದ ಹೋಟೆಲಿನಲ್ಲಿ ನಟರೊಬ್ಬರು ದಲಿತ ಸಮುದಾಯದ ವೇಟರ್ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ವೇಟರ್ ಗೆ ಕಣ್ಣುಗಳಿಗೆ ಹಾನಿಯಾಗಿದೆ. ಸಿಸಿ ಟಿವಿ ದೃಶ್ಯ ಇದೆ. ಈ ಬಗ್ಗೆ ಕೂಡಲೇ ತನಿಖೆ ನಡೆಸಿ ಎಂದು ಇಂದ್ರಜಿತ್ ಆಗ್ರಹಿಸಿದ್ದಾರೆ. ಆದರೆ ನಟನ ಹೆಸರನ್ನು ಮಾತ್ರ ಇಂದ್ರಜಿತ್ ಅವರು ಮನವಿಯಲ್ಲಿ ಉಲ್ಲೇಖ ಮಾಡಿಲ್ಲ.










