ಶಿವಮೊಗ್ಗ : ವಿದ್ಯುತ್ ಕಂಬಕ್ಕೆ ಟಾಟಾ ಸುಮೋ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆ ಸಮೀಪದ ವರನಹೊಂಡ ಎಂಬಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ನೀಲಮ್ಮ (60) ಎಂದು ಗುರುತಿಸಲಾಗಿದೆ. ತೀರ್ಥಹಳ್ಳಿ ರಸ್ತೆಯ ಜಂಬಳ್ಳಿ ಕಡೆಯಿಂದ ರಿಪ್ಪನ್ ಪೇಟೆಗೆ ಆಗಮಿಸುತ್ತಿದ್ದ ಟಾಟಾ ಸುಮೋದಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಘಟನೆಯಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಗಂಭೀರ ಗಾಯಗೊಂಡ ಮೂವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆ ಸಂಬಂಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಸಂಬಂಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










