ದೇಶದಲ್ಲಿ 38,949 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,10,26,829ಕ್ಕೆ ಏರಿಕೆ…

92
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 38,949 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,10,26,829ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 542 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,12,531ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,10,26,829 ಮಂದಿ ಸೋಂಕಿತರ ಪೈಕಿ ಈವರೆಗೆ 3,01,83,876 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.