ಮರಕ್ಕೆ ಡಿಕ್ಕಿ ಹೊಡೆದ ಐರಾವತ ಬಸ್ – ಚಾಲಕ ಸ್ಥಳದಲ್ಲೇ ಸಾವು…

100
firstsuddi

ವಿರಾಜಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಐರಾವತ ಬಸ್ಸು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಪೆರಂಬಾಡಿ ಬಳಿ ನಡೆದಿದೆ.

ಮುಂಜಾನೆ 4.30ಕ್ಕೆ ಈ ಅಪಘಾತ ಸಂಭವಿಸಿದ್ದು, ಮೃತ ಚಾಲಕನನ್ನು ಸ್ವಾಮಿ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ವೇಳೆ ಈ ಅಪಘತ ಸಂಭವಿಸಿದ್ದು, ಕೇರಳ ಟಾಸ್ಕ್ ಫೋರ್ಸ್ ನಿಂದ ಸತತ ನಾಲ್ಕು ಗಂಟೆಗಳ ಕಾರ್ಯಾಚರಣೆ ನಡೆಸಲಾಯಿತು. ನಂತರ ಸ್ಟೇರಿಂಗ್ ಅಡಿಯಲ್ಲಿ ಸಿಲುಕಿದ್ದ ಚಾಲಕನನ್ನು ಕಾರ್ಯಪಡೆ ಸಿಬ್ಬಂದಿ ಹೊರತೆಗೆದಿದ್ದಾರೆ. ಅದರೆ ಈ ವೇಳೆ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಬಸ್ಸಿನಲ್ಲಿ 19 ಮಂದಿ ಪ್ರಯಾಣಿಸುತ್ತಿದ್ದು, ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು ಇದೀಗ ಅವರನ್ನು ಕೇರಳದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.