ದೇಶದಲ್ಲಿ ಹಕ್ಕಿ ಜ್ವರಕ್ಕೆ ಮೊದಲ ಬಲಿ -12ವರ್ಷದ ಬಾಲಕ ಸಾವು…

92
firstsuddi

ದೆಹಲಿ : ಹನ್ನೇರಡು ವರ್ಷದ ಬಾಲಕನೊಬ್ಬ ಹಕ್ಕಿ ಜ್ವರಕ್ಕೆ ಬಲಿಯಾಗಿದ್ದು, ಈ ವರ್ಷದಲ್ಲಿ ದೇಶದಲ್ಲೇ ಮೊದಲು ಹಕ್ಕಿ ಜ್ವರಕ್ಕೆ ಬಲಿಯಾಗುತ್ತಿರುವ ಮೊದಲ ಪ್ರಕರಣವಾಗಿದೆ. ಏಮ್ಸ್ ನ ಮಕ್ಕಳ ವಿಭಾಗದಲ್ಲಿ ಅಡ್ಮಿಟ್ ಆಗಿದ್ದ ಬಾಲಕನಿಗೆ ಕಳೆದ ಕೆಲವು ದಿನಗಳಿಂದಲೂ ಹಕ್ಕಿಜ್ವರಕ್ಕೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಾವನ್ನಪ್ಪಿದ್ದಾನೆ.

ಇನ್ನೂ ಬಾಲಕನ ಸಂಪರ್ಕಕ್ಕೆ ಬಂದ ಏಮ್ಸ್ ನ ಎಲ್ಲ ಸಿಬ್ಬಂದಿಯೂ ಐಸೋಲೇಟ್ ಗೆ ಒಳಗಾಗಿದ್ದಾರೆ. ಈ ಬಗ್ಗೆ ಮಾತನಾಡಿದ ಏಮ್ಸ್‍ನ ವೈದ್ಯರೊಬ್ಬರು, ಈ ಬಾಲಕನಿಗೆ ಲ್ಯುಕೋಮಿಯಾ ಮತ್ತು ನ್ಯುಮೋನಿಯಾ ಕೂಡ ಇತ್ತು. ಆತನಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಬಳಿಕ ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಎಂದೂ ತಿಳಿಸಿದ್ದಾರೆ.

ಹಕ್ಕಿ ಜ್ವರಕ್ಕೆ H5N1 ಎಂದೂ ಕರೆಯುತ್ತಾರೆ. ಈ ವೈರಸ್ ಹಕ್ಕಿಗಳಲ್ಲಿ ಕಾಣಿಸಿಕೊಳ್ಳುವುದರೊಂದಿಗೆ ಮನುಷ್ಯರಿಗೂ ತಗುಲುತ್ತದೆ. ಹಾಗೇ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಇನ್ನು ಹಕ್ಕಿ ಜ್ವರ ಮನುಷ್ಯನಿಗೆ ತಗುಲುವುದು ತೀರ ಅಪರೂಪ. ಆದರೆ ಒಮ್ಮೆ ಕಾಣಿಸಿಕೊಂಡರೆ ಸಾವಿನ ಸಾಧ್ಯತೆ ಶೇ. 60ರಷ್ಟು ಇರುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ತಿಳಿಸಿದೆ.