ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ!

135
firstsuddi

ಮೈಸೂರು : ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ವಿನಾಯಕ ನಗರದಲ್ಲಿ ನಡೆದಿದೆ.

ಪಲ್ಲವಿ ಮೃತ ದುರ್ದೈವಿ. ಮೂಲತಃ ಹುಣಸೂರು ತಾಲ್ಲೂಕು ಹಳ್ಳದಕೊಪ್ಪಲು ಗ್ರಾಮದ ನಿವಾಸಿಯಾಗಿದ್ದ ಪಲ್ಲವಿಗೆ ಒಂದು ವರ್ಷದ ಹಿಂದೆ ಮದುವೆಯಾಗಿತ್ತು. ಗಂಡ-ಹೆಂಡತಿ ನಡುವೆ ಚಿಕ್ಕ ಚಿಕ್ಕ ವಿಚಾರಕ್ಕೂ ಗಲಾಟೆ ನಡೆಯುತ್ತಿತ್ತು. ಇದರಿಂದ ಮನನೊಂದು ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ ಎನ್ನಲಾಗಿದೆ.

ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.