ಬೆಂಗಳೂರು : ಇಂದು ಎಸ್ ಎಸ್ ಎಲ್ ಸಿ ಕೊನೆಯ ಪರೀಕ್ಷೆ. ಕೊರೊನಾ ಕಾರಣದಿಂದ ಇದೇ ಮೊದಲ ಬಾರಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯು ಆರು ದಿನದ ಬದಲಿಗೆ ಎರಡು ದಿನ ನಡೆಯುತ್ತಿದೆ. ಈಗಾಗಲೇ ಮೊದಲ ದಿನದ ಕೋರ್ ವಿಷಯಗಳ ಪರೀಕ್ಷೆಯು ಯಶಸ್ವಿಯಾಗಿದ್ದು, ಇಂದು ಭಾಷಾ ವಿಷಯಗಳಾದ ಕನ್ನಡ, ಇಂಗ್ಲಿಷ್, ಹಿಂದಿ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10.30ರಿಂದ 1-30ರವರೆಗೆ ಪರೀಕ್ಷೆ ನಡೆಯಲಿದೆ.
ರಾಜ್ಯಾದ್ಯಂತ ಇಂದು 4,885 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಸುಮಾರು 8.76 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 1 ಕೊಠಡಿಯಲ್ಲಿ 12 ವಿದ್ಯಾರ್ಥಿಗಳು ಕೂರಲು ಮಾತ್ರ ವ್ಯವಸ್ಥೆ ಕಲ್ಪಿಸಲಾಗಿದ್ದು, ಒಂದು ಡೆಸ್ಕ್ ಗೆ ಒಬ್ಬರೇ ವಿದ್ಯಾರ್ಥಿ ಪರೀಕ್ಷೆ ಬರೆಯಲಿದ್ದಾರೆ. ಆಗಸ್ಟ್ 10ರ ಒಳಗೆ ಫಲಿತಾಂಶ ಪ್ರಕಟ ಆಗಲಿದೆ.










