ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ನಗರದ ಕಾಚರಕನಹಳ್ಲಿಯ ಕೋದಂಡರಾಮ ದೇವಸ್ಥಾನದಲ್ಲಿ ವಿಶ್ವಹಿಂದೂ ಪರಿಷತ್ ಆಯೋಜಿಸಿದ್ದ ಧನ್ವಂತರಿ ಯಾಗದಲ್ಲಿ ಭಾಗಿಯಾದರು. ಲೋಕ ಕಲ್ಯಾಣಕ್ಕಾಗಿ ನಡೆಯುತ್ತಿರುವ ಯಾಗದಲ್ಲಿ ಸಕ್ರಿಯವಾಗಿ ಭಾಗಿಯಾಗಿ ಪೂಜಾ ಕೈಂಕರ್ಯ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 25ರ ಬಳಿಕ ಹೈಕಮಾಂಡ್ ಏನು ಹೇಳುತ್ತದೆಯೋ ಅದರಂತೆ ನಡೆದುಕೊಳ್ಳುತ್ತೇನೆ. ನನ್ನ ಪರ ಪ್ರತಿಭಟನೆ ನಡೆಸುವುದು ಸರಿಯಲ್ಲ ಎಂದು ಹೇಳುವ ಮೂಲಕ ರಾಜೀನಾಮೆ ನೀಡುವುದರ ಕುರಿತು ಸುಳಿವು ನೀಡಿದ್ದಾರೆ.
ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ. ಜುಲೈ 25ರ ನಂತರ ಹೈಕಮಾಂಡ್ ಸಂದೇಶಕ್ಕೆ ಕಾಯುತ್ತಿದ್ದೇನೆ.
26 ಕ್ಕೆ ಸರ್ಕಾರದ ಸಾಧನೆ ಬಗ್ಗೆ ವಿಶೇಷ ಕಾರ್ಯಕ್ರಮ ಇಟ್ಟುಕೊಂಡಿದ್ದೇವೆ. ಈ ಕಾರ್ಯಕ್ರಮ ಬಳಿಕ ವರಿಷ್ಠರ ಸೂಚನೆಯಂತೆ ನಡ್ಕೋತೇನೆ ಎಂದು ಬಿಎಸ್ ವೈ ತಿಳಿಸಿದರು.










