ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಅಧಿಕ ಮಳೆ – ಜಲಾವೃತಗೊಂಡ 8 ಸೇತುವೆಗಳು…

106
firstsuddi

ಚಿಕ್ಕೋಡಿ : ಮಹಾರಾಷ್ಟ್ರ ಹಾಗೂ ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಎಂಟು ಸೇತುವೆಗಳು ಜಲಾವೃತಗೊಂಡಿವೆ.

ಕೃಷ್ಣಾ, ದೂದಗಂಗಾ, ವೇದಗಂಗಾ ಹಾಗೂ ಹೀರಣ್ಯಕೇಶಿ ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗಿದ್ದು, ಚಿಕ್ಕೋಡಿ, ನಿಪ್ಪಾಣಿ, ಹುಕ್ಕೇರಿ ತಾಲ್ಲೂಕುಗಳ ಎಂಟು ಸೇತುವೆಗಳು ಜಲಾವೃತಗೊಂಡಿವೆ. ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಯಡೂರ – ಕಲ್ಲೋಳ ಸೇತುವೆ, ದೂದಗಂಗಾ, ವೇದಗಂಗಾ ಹಾಗೂ ಹೀರಣ್ಯಕೇಶಿ ನದಿಗಳಿಗೆ ಅಡ್ಡಲಾಗಿ ನಿರ್ಮಿಸಿರುವ ಜತ್ರಾಟ- ಭೀವಶಿ, ಭೋಜ – ಕಾರದಗಾ, ಅಕ್ಕೋಳ-ಸಿದ್ನಾಳ, ನಾಗನೂರು-ಗೋಟೂರ, ಹುನ್ನರಗಿ-ಮಮದಾಪೂರ, ಭೋಜವಾಡಿ-ಕುನ್ನೂರ, ಮಲಿಕವಾಡ- ದತ್ತವಾಡ ಸೇತುವೆಗಳು ಮುಳುಗಡೆಯಾಗಿದೆ. ಪರಿಣಾಮ 16 ಗ್ರಾಮಗಳ ಸಂಪರ್ಕ ಕಡಿತಗೊಂಡಿದ್ದು, ಜನರು ಅನ್ಯ ಮಾರ್ಗಗಳ ಮೂಲಕ ಸಂಚರಿಸುತ್ತಿದ್ದಾರೆ.

ಕೃಷ್ಣಾ ನದಿಗೆ 70 ಸಾವಿರ ಕ್ಯೂಸೆಕ್ ಗೂ ಅಧಿಕ ಪ್ರಮಾಣದ ಒಳ ಹರಿವಿದ್ದು, ಹಿಪ್ಪರಗಿ ಬ್ಯಾರೇಜ್ನಿಂದ 74,000 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.