ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಿಎಸ್ ವೈ.

88
firstsuddi

ಬೆಂಗಳೂರು : ವಿಧಾನಸೌಧದಲ್ಲಿ ನಡೆದ ಸರ್ಕಾರದ ಸಾಧನಾ ಕಾರ್ಯಕ್ರಮದ ನಂತರ ನೇರವಾಗಿ ರಾಜಭವನಕ್ಕೆ ತೆರಳಿದ ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸಂಪುಟ ಸಹೋದ್ಯೋಗಿಗಳ ಸಮ್ಮುಖದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ರಾಜೀನಾಮೆ ಪತ್ರ ಸಲ್ಲಿಸಿದರು. 

2019 ರ ಜುಲೈ 26 ರ ಸಂಜೆ 6 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಿದ ಬಿ.ಎಸ್.ಯಡಿಯೂರಪ್ಪನವರು ಸರಿಯಾಗಿ ಎರಡು ವರ್ಷಕ್ಕೆ ಪದತ್ಯಾಗ ಮಾಡಿದ್ದಾರೆ. ಹೊಸ ಸಿಎಂ ಆಗುವರೆಗೂ ಯಡಿಯೂರಪ್ಪನವರು ಹಂಗಾಮಿ ಸಿಎಂ ಆಗಿರಲಿದ್ದಾರೆ.