ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣ ; ರಾಜ್ ಕುಂದ್ರಾಗೆ 14 ದಿನಗಳ ನ್ಯಾಯಾಂಗ ಬಂಧನ…

104
firstsuddi

ಮುಂಬೈ : ಅಶ್ಲೀಲ ಚಿತ್ರ ನಿಮಾಣದ ಆರೋಪದಡಿ ಮುಂಬೈ ಪೊಲೀಸರ ವಶದಲ್ಲಿರುವ ಉದ್ಯಮಿ, ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಕಿಲಾ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ. ಮುಂಬೈ ಪೊಲೀಸರು ಆರೋಪಿಯನ್ನು ಇನ್ನು ಏಳು ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಆದರೆ ನ್ಯಾಯಲಯ ಮನವಿಯನ್ನು ತಳ್ಳಿಹಾಕಿ, ರಾಜ್ ಕುಂದ್ರಾಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದೆ.

ರಾಜ್ ಕುಂದ್ರಾ ಅವರನ್ನು ಜುಲೈ 19ರಂದು ಮುಂಬೈ ಪೊಲೀಸರು ಬಂದಿಸಿದ್ದರು. ಬಳಿಕ ಜುಲೈ 27ರವೆರೆಗೆ ನ್ಯಾಯಾಲಯ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿತ್ತು. ಇಂದು ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ರಾಜ್ ಕುಂದ್ರಾ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಇರಿಸಲು ಆದೇಶಿಸಲಾಗಿದೆ.