ಮನೆ ಬಿಟ್ಟೋದ ಪತ್ನಿ – ಮನನೊಂದು ಪತಿ ಆತ್ಮಹತ್ಯೆ!

106
firstsuddi

ಬೆಂಗಳೂರು/ನೆಲಮಂಗಲ : ಪತ್ನಿ ದೂರವಾದ ಹಿನ್ನೆಲೆ ಮನನೊಂದ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲ್ಲೂಕಿನ ಡಾಬಸ್ ಪೇಟೆಯ ಶಿವಗಂಗಾ ವೃತ್ತದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಶಿವರಾಮ್(42) ಎಂದು ಗುರುತಿಸಲಾಗಿದೆ. ಕ್ಷುಲಕ ಕಾರಣಕ್ಕೆ ಕೆಲ ದಿನಗಳ ಹಿಂದೆ ಪತ್ನಿ ಮನೆ ಬಿಟ್ಟು ಹೋಗಿದ್ದಳು. ಪತ್ನಿ ಇಲ್ಲದೆ ಮನನೊಂದಿದ್ದ ಪತಿ ತಾನು ವಾಸವಾಗಿದ್ದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಕಳೆದ ಮೂರು ದಿನಗಳಿಂದ ಮನೆಯ ಬಾಗಿಲು ತೆರೆಯದ ಹಿನ್ನೆಲೆ ಸ್ಥಳೀಯರು ನೋಡಿದಾಗ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಎರಡು ದಿನಗಳ ಹಿಂದೆಯೇ ನೇಣಿಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ.

ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.