ಬೆಂಗಳೂರು : ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಮೊದಲ ದಿನವೇ ಬಸವರಾಜ್ ಬೊಮ್ಮಾಯಿ ಅವರು ಹೊಸ ಯೋಜನೆಗಳನ್ನು ಘೋಷಣೆ ಮಾಡಿದರು. ಅದರಲ್ಲಿ ಪ್ರಮುಖವಾಗಿ ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ಒಂದು ಸಾವಿರ ಕೋಟಿ ವೆಚ್ಚದಲ್ಲಿ ಹೊಸ ಶಿಷ್ಯ ವೇತನ ಯೋಜನೆಯನ್ನು ಪ್ರಕಟಿಸಿದ್ದಾರೆ.
ಸಿಎಂ ಬೊಮ್ಮಾಯಿ ಘೋಷಿಸಿರುವ ಯೋಜನೆಗಳು :
• ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ 1,000 ಕೋಟಿ ವೆಚ್ಚದಲ್ಲಿ ಹೊಸ ಶಿಷ್ಯ ವೇತನ ಯೋಜನೆ.
• ಸಂಧ್ಯಾ ಸುರಕ್ಷಾ ಯೋಜನೆಯಲ್ಲಿ ಮಾಸಾಶನ 1,000 ದಿಂದ 1,200 ರೂ.ಗೆ ಹೆಚ್ಚಳ – ಈ ಯೋಜನೆಗೆ 863.52 ಕೋಟಿ ಹೆಚ್ಚುವರಿ ವೆಚ್ಚ ಆಗಲಿದ್ದು, ಈ ಮೂಲಕ 35.98 ಲಕ್ಷ ಫಲಾನುಭವಿಗಳಿಗೆ ಲಾಭ ಆಗಲಿದೆ.
• ಅಂಗವಿಕಲರ ವೇತನ 600 ರೂ. ಯಿಂದ 800 ರೂ.ಗೆ ಹೆಚ್ಚಳ – ಈ ಯೋಜನೆಗೆ 90 ಕೋಟಿ ಹೆಚ್ಚುವರಿ ವೆಚ್ಚ ಆಗಲಿದ್ದು, 3.66 ಲಕ್ಷ ಫಲಾನುಭವಿಗಳಿಗೆ ಪ್ರಯೋಜನ ಆಗಲಿದೆ.
• ವಿಧವಾ ವೇತನ 800 ರೂ.ಗೆ ಹೆಚ್ಚಳ – 416 ಕೋಟಿ ಹೆಚ್ಚುವರಿ ಹೊರೆ ಆಗಲಿದ್ದು, 17.25 ಲಕ್ಷ ಫಲಾನುಭವಿಗಳಿಗೆ ಲಾಭ ಸಿಗಲಿದೆ.










