ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ರೌಡಿಶೀಟರ್ ನ ಬರ್ಬರ ಹತ್ಯೆ!

93
firstsuddi

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಹಾಡಹಗಲೇ ನೆತ್ತರು ಹರಿದಿದೆ. ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಸವೇಶ್ವರನಗರ ನಿವಾಸಿಯಾದ ಹರೀಶ್ ಕೊಲೆಯಾದ ರೌಡಿಶೀಟರ್. ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಸಿಆರ್ ಪಿಸಿ 110ರಡಿ ಮುಚ್ಚಳಿಕೆ ಪತ್ರ ಬರೆಯಿಸಿಕೊಂಡು ವಾರ್ನ್ ಮಾಡಲು ಇಂದು ಬಾಣಸವಾಡಿ ಪೊಲೀಸರು ಠಾಣೆಗೆ ಕರೆಸಿಕೊಂಡಿದ್ದರು.

ಠಾಣೆಯಿಂದ ಬೈಕ್ ನಲ್ಲಿ ಹೋಗುತ್ತಿದ್ದ ಹರೀಶ್ ನನ್ನು ಕಾರಿನಲ್ಲಿ ಹಿಂಬಾಲಿಸಿದ ಮೂರ್ನಾಲ್ಕು ಮಂದಿ ದುಷ್ಕರ್ಮಿಗಳು, ಸಿಎಂಆರ್ ಕಾಲೇಜು ಬಳಿ ಏಕಾಏಕಿ ಆತನ ಮೇಲೆ ಅಟ್ಯಾಕ್ ಮಾಡಿ, ಚಾಕುವಿಂದ ಚುಚ್ಚಿ, ಬಳಿಕ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ರೌಡಿಶೀಟರ್ ಹರೀಶ್ ವಿರುದ್ಧ 2018ರಲ್ಲಿ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ನಾಲ್ಕು ಪ್ರಕರಣ ದಾಖಲಾಗಿದ್ದು, ಹಳೆ ದ್ವೇಷದ ಹಿನ್ನಲೆ ಕೊಲೆಯಾಗಿರಬಹುದು ಎಂದು ಶಂಕಿಸಲಾಗಿದೆ.

ಘಟನಾ ಸ್ಥಳಕ್ಕೆ ನಗರ ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.