ಹುಬ್ಬಳ್ಳಿ- ಧಾರವಾಡದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತೇನೆ : ಸಿಎಂ ಬೊಮ್ಮಾಯಿ.

73
firstsuddi

ಹುಬ್ಬಳ್ಳಿ : ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ನನ್ನ ಪ್ರೀತಿಯ ಊರು ಹುಬ್ಬಳ್ಳಿ, ನಾನು ಹುಬ್ಬಳ್ಳಿಯಲ್ಲೇ ಹುಟ್ಟಿ ಬೆಳೆದಿದ್ದೇನೆ. ನನ್ನ ಶಿಕ್ಷಣ ಇಲ್ಲೇ ಮುಗಿದಿದೆ. ಸಿಎಂ ಆಗಿ ನಾನು ಹುಬ್ಬಳ್ಳಿಗೆ ಬರುತ್ತೇನೆ ಅಂದುಕೊಂಡಿರಲಿಲ್ಲ. ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ನಡ್ಡಾ ನನ್ನನ್ನು ಗುರುತಿಸಿ ಸಿಎಂ ಮಾಡಿದ್ದಾರೆ. ಇವರೆಲ್ಲರ ಆಶೀರ್ವಾದದಿಂದ ಇಲ್ಲಿ ಬಂದಿದ್ದೇನೆ. ಬೆಂಗಳೂರು ಬಿಟ್ಟ ನಂತರ ಹುಬ್ಬಳ್ಳಿ- ಧಾರವಾಡ ದೊಡ್ಡ ನಗರ. ಇಲ್ಲಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಎಂದು ಭರವಸೆ ನೀಡಿದರು.

ಜಗದೀಶ್ ಶೆಟ್ಟರ್ ಸಂಪುಟ ಸೇರುವುದಿಲ್ಲ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಜಗದೀಶ್ ಶೆಟ್ಟರ್ ಅವರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ನಾನು ವೈಯಕ್ತಿಕವಾಗಿ ಬಂದು ಭೇಟಿ ಮಾಡುತ್ತೇನೆ. ಜಗದೀಶ್ ಶೆಟ್ಟರ್ ಮತ್ತು ನಾನು ಆತ್ಮೀಯ ಸ್ನೇಹಿತರು, ಬೇರೆ ಪಕ್ಷದಲ್ಲಿ ಇದ್ದಾಗಲೂ ಉತ್ತಮ ಬಾಂಧವ್ಯ ಹೊಂದಿದ್ದೆವು. ಹಿರಿಯರ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸುತ್ತೇನೆ ಎಂದು ಹೇಳಿದರು.