ಮಾಜಿ ಸಚಿವ ಶಿವರಾಂ ಹೆಬ್ಬಾರ್ ಕಾರು ಅಪಘಾತ ; ಸಣ್ಣ ಪುಟ್ಟ ಗಾಯಗಳಿಂದ ಪಾರು…

72
firstsuddi

ಹುಬ್ಬಳ್ಳಿ : ಮಾಜಿ ಸಚಿವ ಶಿವರಾಂ ಹೆಬ್ಬಾರ್ ಅವರ ಕಾರು ಅಪಘಾತವಾಗಿರುವ ಘಟನೆ ನಗರದ ವಿಮಾನ ನಿಲ್ದಾಣದ ಬಳಿ ನಡೆದಿದೆ.

ಹುಬ್ಬಳ್ಳಿ ಏರ್ ಪೋರ್ಟ್ ನಿಂದ ಮುಖ್ಯಮಂತ್ರಿ ಬೊಮ್ಮಾಯಿ ಹೊರ ಹೋಗುತ್ತಿದ್ದ ವೇಳೆ ಕಾರ್ ಗಳ ಮಧ್ಯೆ ಅಪಘಾತ ಸಂಭವಿಸಿದ್ದು, ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಾವಲು ಕಾರಿಗೆ ಮಾಜಿ ಸಚಿವ ಶಿವರಾಮ ಹೆಬ್ಬಾರ ಅವರ ಕಾರು ಗುದ್ದಿದೆ.

ಆದರೆ ಘಟನೆ ವೇಳೆ ಮಾಜಿ ಸಚಿವ ಶಿವರಾಂ ಹೆಬ್ಬಾರ್ ಅವರು ಸಿಎಂ ಕಾರಿನಲ್ಲಿ ಇದ್ದ ಕಾರಣ ಅವರಿಗೆ ಯಾವುದೇ ಗಾಯಗಳಾಗಿಲ್ಲ. ಅಪಘಾತ ಸಮಯದಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಿಎಂ ಕಾರು ಹಿಂಬಾಲಿಸುವ ಭರದಲ್ಲಿ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.