ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 40,134 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,16,95,958ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 422 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,24,773ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,16,95,958 ಮಂದಿ ಸೋಂಕಿತರ ಪೈಕಿ ಈವರೆಗೆ 3,08,57,467 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










