ಟೋಕಿಯೋ : ಕುಸ್ತಿಯಲ್ಲಿ ರವಿ ಕುಮಾರ್ ದಹಿಯಾ ಅವರು ಫೈನಲ್ ಪ್ರವೇಶಿಸಿದ್ದು, ಈ ಮೂಲಕ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಪದಕ ಖಚಿತಗೊಂಡಿದೆ.
ಇಂದು ನಡೆದ ಪುರುಷರ 57 ಕೆ.ಜಿ. ಫ್ರಿಸ್ಟೈಲ್ ವಿಭಾಗದ ಸೆಮಿಫೈನಲ್ ನಲ್ಲಿ ರವಿಕುಮಾರ್ ಕಜಕಿಸ್ತಾನದ ನುರಿಸ್ಲಾಮ್ ಸನಾಯೆವ್ ವಿರುದ್ಧ ಗೆಲುವು ದಾಖಲಿಸಿದ್ದಾರೆ. ಒಂದು ಹಂತದಲ್ಲಿ 7-9ರಲ್ಲಿ ಹಿನ್ನಡೆ ಅನುಭವಿಸಿದ್ದ ರವಿ ಎದುರಾಳಿಯನ್ನು ಕೆಳಗೆ ಬೀಳಿಸುವ ಮೂಲಕ ಅಮೋಘ ಗೆಲುವು ಕಂಡಿದ್ದಾರೆ.
ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಈಗಾಗಲೇ ವೇಟ್ ಲಿಫ್ಟರ್ ಮೀರಾಬಾಯಿ ಚನು, ಶಟ್ಲರ್ ಪಿವಿ ಸಿಂಧು, ಬಾಕ್ಸರ್ ಲವ್ಲಿನಾ ಬೋರ್ಗೊಹೈನ್ 3 ಪದಕ ತಂದುಕೊಟ್ಟಿದ್ದಾರೆ.










