ಭದ್ರಾ ನದಿಯಲ್ಲಿ ಕೊಚ್ಚಿ ಹೋಗಿದ್ದ ಬೆಂಗಳೂರು ವೈದ್ಯನ ಮೃತದೇಹ ಪತ್ತೆ…

106
firstsuddi

ಮೂಡಿಗೆರೆ : ನಾಲ್ಕು ದಿನದ ಹಿಂದೆ ತಾಲ್ಲೂಕಿನ ಕಳಸ ಭಾಗಕ್ಕೆ ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರು ಮೂಲದ ವೈದ್ಯನ ಮೃತದೇಹ ಕಳಸ ತಾಲ್ಲೂಕಿನ ಹಳುವಳ್ಳಿ ಗ್ರಾಮದಲ್ಲಿ ಪತ್ತೆಯಾಗಿದೆ.

ಮೃತನನ್ನು ರುದ್ರೇಶ್ (36) ಎಂದು ಗುರುತಿಸಲಾಗಿದೆ. ಪ್ರವಾಸಕ್ಕೆಂದು ಬಂದಿದ್ದ ರುದ್ರೇಶ್ ಸ್ಥಳೀಯ ಹೋಂ ಸ್ಟೇನಲ್ಲಿ ತಂಗಿದ್ದರು. ಈ ವೇಳೆ ಭದ್ರಾ ನದಿಯ ವಸಿಷ್ಠ ತೀರ್ಥದಲ್ಲಿ ಫೋಟೋ ತೆಗೆಯುವಾಗ ಕಾಲು ಜಾರಿ ಬಿದ್ದು ನಾಪತ್ತೆಯಾಗಿದ್ದರು. ಕಳೆದ ನಾಲ್ಕು ದಿನಗಳಿಂದ ಎಸ್.ಡಿ.ಆರ್.ಎಫ್, ಅಗ್ನಿಶಾಮಕ ಸಿಬ್ಬಂದಿ, ಹಾಗೂ ಸ್ಥಳೀಯರು ಹುಡುಕಾಟ ನಡೆಸಿದ್ದರು. ಆದರೆ ಮೃತದೇಹ ಪತ್ತೆಯಾಗಿರಲಿಲ್ಲ.

ಸುಮಾರು 70 ಜನ ಸಿಬ್ಬಂದಿ ನಾಲ್ಕು ದಿನದಿಂದ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸಿದ್ದರು. ನಿರಂತರವಾಗಿ ಹುಡುಕಿದ ಪರಿಣಾಮ ನಿನ್ನೆ ರುದ್ರೇಶ್ ಬಿದ್ದ ಜಾಗದಿಂದ ಸುಮಾರು ಐದು ಕಿ.ಮೀ. ದೂರದಲ್ಲಿ ಮೃತದೇಹ ಪತ್ತೆಯಾಗಿದೆ.