ಬೆಂಗಳೂರು : ಬೆಳ್ಳಂಬೆಳಗ್ಗೆ ರೌಡಿ ಶೀಟರ್ ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಡಿಜೆ ಹಳ್ಳಿ ಇಂದಿರಾ ಕ್ಯಾಂಟೀನ್ ಬಳಿ ಘಟನೆ ನಡೆದಿದ್ದು, ರೌಡಿ ಶೀಟರ್ ಮಜರ್ ಕೊಲೆಯಾದ ವ್ಯಕ್ತಿ. ಡಿಜೆ ಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬತ್ತಿ ಫೈರೋಜ್ ಕುಟುಂಬದ ಹುಡುಗಿಯೊಬ್ಬಳ ವಿಚಾರದಲ್ಲಿ ಗಲಾಟೆ ನಡೆದಿದೆ ಎಂದು ತಿಳಿದುಬಂದಿದೆ. ನಿನ್ನೆ ರಾತ್ರಿ ಎರಡೂ ಕಡೆಯವರು ಗಲಾಟೆ ಮಾಡಿಕೊಂಡಿದ್ದಾರೆ. ನಂತರ ಇಂದು ಬೆಳಗ್ಗೆ ಮನೆಯಲ್ಲಿದ್ದ ಮಜರ್ ನನ್ನು ಕರೆಯಿಸಿಕೊಂಡಿದ್ದಾರೆ. ಮನೆಯ ಒಳಗೆ ಸೇರಿಸಿಕೊಂಡು ಮನೆಯ ಮಹಿಳೆಯರು ಮತ್ತು ಪುರುಷರು ಎಲ್ಲರೂ ಸೇರಿ ಕೊಲೆ ಮಾಡಿದ್ದಾರೆ ಎನ್ನಲಾಗ್ತಿದೆ.
ಮಹಿಳೆಯರು ಸೇರಿ ನಾಲ್ವರು ಅರೋಪಿಗಳನ್ನು ವಶಕ್ಕೆ ಪಡೆದಿರುವ ಡಿಜೆ ಹಳ್ಳಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.










