ಎಸ್ ಎಸ್ ಎಲ್ ಸಿ ಪಲಿತಾಂಶ ಪ್ರಕಟ – ಶೇ.99.9ರಷ್ಟು ಫಲಿತಾಂಶ…

83
firstsuddi

ಬೆಂಗಳೂರು : ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಶೇ.99.9ರಷ್ಟು ಫಲಿತಾಂಶ ಹೊರಬಂದಿದೆ. ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಮಧ್ಯಾಹ್ನ 3:30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದು, ವಿದ್ಯಾರ್ಥಿನಿಯೊಬ್ಬಳು ಬೇರೆ ವಿದ್ಯಾರ್ಥಿನಿಯನ್ನು ಪರೀಕ್ಷೆಗೆ ಕಳುಹಿಸಿದ್ದ ಕಾರಣ ಆ ವಿದ್ಯಾರ್ಥಿನಿಯನ್ನು ಬಿಟ್ಟು ಉಳಿದೆಲ್ಲ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಎಂದು ಹೇಳಿದರು.

ಶೇ.99.9 ವಿದ್ಯಾರ್ಥಿಗಳು ಉರ್ತೀಣರಾಗಿದ್ದು, ಅದರಲ್ಲಿ 4,70,160 ವಿದ್ಯಾರ್ಥಿಗಳು ಹಾಗೂ 4,01281 ವಿದ್ಯಾರ್ಥಿನಿಯರು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಅದರಲ್ಲಿ A+ ಗ್ರೇಡ್- 1,28,931, A ಗ್ರೇಡ್- 2,50,317,B- ಗ್ರೇಡ್- 2,87,684, C- 1,13,610 ಹಾಗೂ ಗ್ರೇಸ್ ಮಾರ್ಕ್ಸ್ ಪಡೆದು 9 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.

ಫಲಿತಾಂಶದ ಬಗ್ಗೆ ಅಸಮಾಧಾನವಿದ್ದಲ್ಲಿ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು. ಒಂದು ವೇಳೆ ಮರುಪರೀಕ್ಷೆ ಬರೆಯಲು ಇಚ್ಚಿಸಿದಲ್ಲಿ ಎರಡನೇ ಬಾರಿಗೆ ಅರ್ಜಿ ಸಲ್ಲಿಸಬಹುದು. ಅದಕ್ಕೆ ಶಿಕ್ಷಕರ ಸಹಾಯ ಪಡೆದು ಅಗತ್ಯವಿರುವ ದಾಖಲೆಗಳನ್ನು ಭರ್ತಿ ಮಾಡಿ ಮನವಿ ಮಾಡಬಹುದು. ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳೂ ಪಾಸ್ ಆಗಲಿದ್ದಾರೆ. ಫಲಿತಾಂಶವನ್ನು ಸಮತೋಲನದಿಂದ ತೆಗೆದುಕೊಳ್ಳಬೇಕು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.