ಚಿಕ್ಕಮಗಳೂರು : ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ನಗರದ ಜ್ಞಾನರಶ್ಮಿ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ರಷ್ಟು ಫಲಿತಾಂಶ ಲಭಿಸಿದೆ.
35 ವಿದ್ಯಾರ್ಥಿಗಳು ಈ ಬಾರಿ ಶಾಲೆಯಿಂದ ಪರೀಕ್ಷೆಗೆ ಹಾಜರಾಗಿದ್ದು ಅವರಲ್ಲಿ 8 ವಿದ್ಯಾರ್ಥಿಗಳು ಅತ್ಯುತ್ತಮ ದರ್ಜೆ, 23 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ ನಾಲ್ಕು ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.
ವಿದ್ಯಾರ್ಥಿ ಹೆಚ್.ಎನ್.ಕಾರ್ತಿಕ್ 611 ಅಂಕ ಪಡೆದು ಶೇ.97.76 ಫಲಿತಾಂಶ ಗಳಿಸುವ ಮೂಲಕ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದರೆ ಬಿ.ಬಿ.ಫಾತಿಮಾ 604 ಅಂಕ ಗಳಿಸಿ ದ್ವಿತೀಯ ಸ್ಥಾನ, ಪಿ.ಎಸ್.ಚೇತನ್ 570 ಅಂಕ ಗಳಿಸಿ ತೃತೀಯ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿ ಹೆಚ್.ಎನ್.ಕಾರ್ತೀಕ್ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಗಳಿಸುವ ಮೂಲಕ ವಿಶೇಷ ಸಾಧನೆ ಮಾಡಿದ್ದಾನೆ ಎಂದು ಶಾಲೆಯ ಪ್ರಾಂಶುಪಾಲೆ ಪಾಲಾಕ್ಷಮ್ಮ ತಿಳಿಸಿದ್ದಾರೆ.










