ಕಾಂಗ್ರೆಸ್ ನವರು ಕುಡುಕ…….ಮಕ್ಕಳು – ಅವಾಚ್ಯ ಶಬ್ಧ ಬಳಸಿದ ಸಚಿವ ಕೆ.ಎಸ್. ಈಶ್ವರಪ್ಪ.

111
firstsuddi

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪನವರು ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡುವಾಗ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡುವ ಭರದಲ್ಲಿ ಅಶ್ಲೀಲ ಪದ ಬಳಸಿದ್ದಾರೆ. ಈಶ್ವರಪ್ಪನವರು ಹೆಸರು ಬದಲಾಯಿಸಿಕೊಳ್ಳಲಿ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ತಿರುಗೇಟು ನೀಡುವ ಭರದಲ್ಲಿ ಕಾಂಗ್ರೆಸ್ ನವರು ಕುಡುಕ ….. ಮಕ್ಕಳು’ ಎಂದು ಅಶ್ಲೀಲವಾಗಿ ಮಾತನಾಡಿದ್ದು, ಮತ್ತೊಮ್ಮೆ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಈ ಕುರಿತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಈಶ್ವರಪ್ಪನಿಗೆ ಸಂಸ್ಕೃತಿ ಇಲ್ಲ, ಸಂಸ್ಕೃತಿ, ಸಂಸ್ಕಾರ ಇಲ್ಲದವರು ಈ ರೀತಿ ಮಾತನಾಡುತ್ತಾರೆ. ಅವರು ಬಂದಿರುವ ದಾರಿಯೇ ಅಂಥದ್ದು, ಅವರಿಂದ ಒಳ್ಳೆದಯನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ನಾನು ಸರ್ಕಾರದಲ್ಲಿದ್ದೇನೆ, ಮಂತ್ರಿಯಾಗಿದ್ದೇನೆ ಎಂಬ ಜವಾಬ್ದಾರಿ ಈಶ್ವರಪ್ಪನವರಿಗೆ ಇಲ್ಲ, ಎಂದರು.

ಸಚಿವ ಈಶ್ವರಪ್ಪನವರು ಅವಾಚ್ಯವಾಗಿ ಹೇಳಿಕೆ ನೀಡಿರುವುದರ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ವಿನಯ್ ಕುಮಾರ್ ಸೊರಕೆ ಕಿಡಿಕಾರಿದ್ದು, ಸಚಿವ ಈಶ್ವರಪ್ಪ ಮೆದುಳಿನ ಸಮತೋಲನ ತಪ್ಪಿದೆ. ಬಿಜೆಪಿ ಅವರ ಮೆದುಳಿನ ಪರೀಕ್ಷೆ ಮಾಡಿಸಬೇಕು. ತಲೆಯ ಪರೀಕ್ಷೆ ನಡೆಸದಿದ್ದರೆ ಮುಂದೆ ರಾಜ್ಯಕ್ಕೆ ಆಗಬಹುದಾದ ಅನಾಹುತ ಎದುರಿಸಬೇಕಾಗುತ್ತದೆ. ಕೂಡಲೇ ಈಶ್ವರಪ್ಪ ಅವರನ್ನು ಚಿಕಿತ್ಸೆಗೆ ಒಳಪಡಿಸಬೇಕು ಎಂದು ಸಲಹೆ ನೀಡಿದರು.

ಇನ್ನೂ ಅವಾಚ್ಯ ಶಬ್ದ ಬಳಸಿದ ಈಶ್ವರಪ್ಪನವರು ಬಳಿಕ ತಮ್ಮ ತಪ್ಪಿನ ಅರಿವಾಗಿ ಆ ಪದ ಹಿಂಪಡೆದಿದ್ದಾರೆ. ಅಲ್ಲದೆ, ಆ ಪದ ಹಠಾತ್ ಆಗಿ ಬಂದಿದೆ. ಅದನ್ನು ವಿವಾದಾತ್ಮಕವಾಗಿ ಮಾಡಬೇಡಿ ಎಂದು ಮನವಿ ಮಾಡಿದರು.