ಶಾಸಕ ಆನಂದ್ ಸಿಂಗ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ?

85
firstsuddi

ಹೊಸಪೇಟೆ (ವಿಜಯನಗರ) : ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಅವರು ತನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇದಕ್ಕೆ ಪೂರಕವಾಗಿ ಹೊಸಪೇಟೆಯಲ್ಲಿರುವ ಶಾಸಕರ ಕಚೇರಿ ಬೋರ್ಡ್ ನ್ನು ಕ್ರೇನ್ ಮೂಲಕ ತೆರವು ಮಾಡಲಾಗಿದೆ. ಸಂಪೂರ್ಣ ಕಚೇರಿ ಬಂದ್ ಮಾಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ 14 ವರ್ಷಗಳಿಂದ ಅಚಿವರು ಈ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿಂದೆಯೂ ಸಮ್ಮಿಶ್ರ ಸರ್ಕಾರದಲ್ಲಿ ಮುನಿಸಿಕೊಂಡು ಆನಂದ ಸಿಂಗ್ ಅವರು ರಾಜೀನಾಮೆ ನೀಡಿದ್ದರು.

ಬೊಮ್ಮಾಯಿ ಕ್ಯಾಬಿನೆಟ್ ನಲ್ಲಿ ಆನಂದ್ ಸಿಂಗ್ ಅವರು ಇಂಧನ ಅಥವಾ ಲೋಕೋಪಯೋಗಿ ಅಥವಾ ಗಣಿ ಇಲಾಖೆ ಬಯಸಿದ್ದರು. ಆದರೆ ಅವರಿಗೆ ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ನೀಡಲಾಗಿತ್ತು.  ಆನಂದ್ ಸಿಂಗ್ ಅವರು ಖಾತೆ ಬದಲಾವಣೆಗೆ ಪಟ್ಟು ಹಿಡಿದಿದ್ದರು. ಅಲ್ಲದೇ, ಬಹಿರಂಗವಾಗಿ ಅಸಮಧಾನ ವ್ಯಕ್ತಪಡಿಸಿದ್ದರು. ಇದೇ ವಿಚಾರಕ್ಕೆ ಆನಂದ್ ಸಿಂಗ್ ಅವರು ರಾಜೀನಾಮೆ ನೀಡುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.