ಚಾಮರಾಜನಗರ : ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಾಂಬಳ್ಳಿ-ಕಿನಕಹಳ್ಳಿ ಗ್ರಾಮದ ರಸ್ತೆಯಲ್ಲಿ ನಡೆದಿದೆ. ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಮೃತರನ್ನು ಮಾಂಬಳ್ಳಿ ಗ್ರಾಮದ ಕಾಂಚನ(20) ಹಾಗೂ ಶ್ರೀನಿವಾಸ್(23) ಎಂದು ಗುರುತಿಸಲಾಗಿದೆ.
ಕಾಂಚನಾ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನರ್ಸ್ ಆಗಿದ್ದು, ಶ್ರೀನಿವಾಸ್ ಕ್ಯಾಬ್ ಡ್ರೈವರ್ ಆಗಿದ್ದರು ಎನ್ನಲಾಗಿದೆ. ಮೃತರಿಬ್ಬರೂ ಕಳೆದ ಹಲವಾರು ವರ್ಷಗಳಿಂದಲೂ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇವರಿಬ್ಬರೂ ಇಂಡಿಕಾ ಕಾರಿನಲ್ಲಿ ಗ್ರಾಮಕ್ಕೆ ಬರುತ್ತಿದ್ದ ವೇಳೆ ರಸ್ತೆಯಲ್ಲಿ ಆತ್ನಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ಈ ಬಗ್ಗೆ ಅಗರ-ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










